ರಾಣೆಬೆನ್ನೂರು(ಹಾವೇರಿ): ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಲು ಮೇಲ್ವರ್ಗದ ವ್ಯಕ್ತಿವೋರ್ವ ಅಡ್ಡಿಪಡಿಸಿದ ಹಿನ್ನೆಲೆ ದಲಿತ ಕುಟುಂಬವೊಂದು ಗ್ರಾಮ ಪಂಚಾಯತ್ ಎದರು ಅಂತ್ಯಸಂಸ್ಕಾರ ಮಾಡಲು ಮುಂದಾದ ಘಟನೆ ರಾಣೆಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ದಲಿತ ಕುಟುಂಬದ ಹಿರಿಯ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಅಂತ್ಯಸಂಸ್ಕಾರ ಮಾಡಲು ಕುಟುಂಬದ ಸದಸ್ಯರು ಸ್ಮಶಾನಕ್ಕೆ ಕಟ್ಟಿಗೆ ತೆಗೆದುಕೊಂಡು ಹೋಗುವ ಸಮಯದಲ್ಲಿ ಮೇಲ್ವರ್ಗದ ವ್ಯಕ್ತಿ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಸ್ಮಶಾನ ನಮ್ಮ ಹೆಸರಿನಲ್ಲಿದೆ. ನೀವು ಇಲ್ಲಿ ಅಂತ್ಯಸಂಸ್ಕಾರ ಮಾಡಬಾರದು ಎಂದಿದ್ದಾರಂತೆ. ಇದರಿಂದ ಕಂಗಾಲಾದ ಕುಟುಂಬಸ್ಥರು ಗ್ರಾಮ ಪಂಚಾಯತ್ ಮುಂದೆ ಅಂತ್ಯಸಂಸ್ಕಾರ ಮಾಡಲು ಮುಂದಾಗಿದ್ದಾರೆ.
ಬಳಿಕ ಸ್ಥಳಕ್ಕಾಗಮಿಸಿದ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರು ಗ್ರಾಮದ ಜನರನ್ನು ಮನವೊಲಿಸುವ ಮೂಲಕ ಮತ್ತೆ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಲು ಅನುವು ಮಾಡಿಕೊಟ್ಟಿದ್ದಾರೆ.