ಹಾವೇರಿ: ಅತಿವೃಷ್ಟಿಗೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬೆಳೆ ನಾಶಕ್ಕೆ ಬೇಸತ್ತ ರೈತ, ನೇಣು ಕುಣಿಕೆಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಜಿಲ್ಲೆಯ ಸವಣೂರು ತಾಲೂಕಿನ ಶಿರಬಡಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತ ರೈತ ಶೇಖಪ್ಪ ಹಡಪದ (54) ಎಂದು ಗುರುತಿಸಲಾಗಿದೆ. ನಾಲ್ಕು ಎಕರೆ ಜಮೀನು ಹೊಂದಿದ್ದ ಶೇಖಪ್ಪ, ಲಕ್ಷಾಂತರ ರೂಪಾಯಿ ಬ್ಯಾಂಕ್ ಮತ್ತು ಕೈಸಾಲ ಮಾಡಿಕೊಂಡಿದ್ದ. ಅತಿವೃಷ್ಟಿಗೆ ಮೆಕ್ಕೆಜೋಳ ಬೆಳೆ ಹಾಳಾಗಿದ್ದರಿಂದ ಸಾಲ ತೀರಿಸಲಾಗದೆ ಬೇಸತ್ತ ರೈತ, ತನ್ನ ಜಮೀನಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.