ಹಾವೇರಿ: ಬೆಳೆ ಹಾಳಾಗಿದ್ದಕ್ಕೆ ಮನನೊಂದು ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಕರೂರು ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು 29 ವರ್ಷದ ಬಾಬುರಾವ್ ಅವತಾಡೆ ಎಂದು ಗುರುತಿಸಲಾಗಿದೆ. ಐದು ಎಕರೆ ಜಮೀನಿದ್ದ ಬಾಬುರಾವ್ ಕೈಗಡ ಮತ್ತು ಬ್ಯಾಂಕ್ನಲ್ಲಿ 5 ಲಕ್ಷ ರೂಪಾಯಿ ಸಾಲ ಮಾಡಿದ್ದ ಎನ್ನಲಾಗಿದೆ. ಅತಿವೃಷ್ಟಿಗೆ ಮೆಕ್ಕೆಜೋಳ ಮತ್ತು ವೀಳ್ಯದೆಲೆ ಬೆಳೆ ಹಾಳಾಗಿದ್ದರಿಂದ ಬೇಸತ್ತು ಬಾಬುರಾವ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಜಮೀನಿನಲ್ಲಿಯೇ ಬಾಬುರಾವ್ ಆತ್ಮಹತ್ಯೆ ಮಾಡಿಕೊಂಡಿದ್ದು, ಸೂಕ್ತ ಪರಿಹಾರಕ್ಕಾಗಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಕುಮಾರಪಟ್ಟಣಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಮಾರಪಟ್ಟಣಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.