ETV Bharat / state

ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆ: ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ - protests in front of hospital

ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಣೆಬೆನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಸರ್ಕಾರದ ವತಿಯಿಂದ ಮೃತ ರೈತನಿಗೆ ಇಪ್ಪತೈದು ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ, ರೈತ ಸಂಘಟನೆ ಮುಖಂಡರು ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದರು.

ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆ
ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆ
author img

By

Published : Sep 27, 2020, 5:32 PM IST

Updated : Sep 27, 2020, 8:59 PM IST

ರಾಣೆಬೆನ್ನೂರು (ಹಾವೇರಿ): ರೈತನೊರ್ವ ಸಾಲಕ್ಕೆ ಹೆದರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಣೆಬೆನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ

ಮಾಲತೇಶಪ್ಪ ಹನುಮಂತ ಬಜಾರಿ (56) ಮೃತ ರೈತ. ಈತ ತನ್ನ ಸ್ವಂತ ಜಮೀನಿನಲ್ಲಿ ಭತ್ತ ಬೆಳೆದಿದ್ದ ಎನ್ನಲಾಗಿದೆ. ಇತ್ತೀಚೆಗೆ ಸುರಿದ ಮಳೆಯಿಂದ ಭತ್ತದ ಬೆಳೆ ನಾಶವಾಗಿತ್ತು. ಅಲ್ಲದೇ ಬ್ಯಾಂಕ್ ಸೇರಿದಂತೆ ವಿವಿಧ ಕಡೆ ಐದು ಲಕ್ಷ ರೂ. ಸಾಲ ಮಾಡಿದ್ದರು ಎನ್ನಲಾಗ್ತಿದೆ.

ಇದರಿಂದ ಮನನೊಂದ ರೈತ ಮಾಲತೇಶಪ್ಪ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ರೈತ ಸಂಘಟನೆ ಮುಖಂಡರು ಶವವನ್ನು ಸರ್ಕಾರಿ ಆಸ್ಪತ್ರೆ ಮುಂದೆ ಇಟ್ಟು ಪ್ರತಿಭಟನೆ ನಡೆಸಿದರು. ಅಲ್ಲದೇ ಸರ್ಕಾರದ ವತಿಯಿಂದ ಮೃತ ರೈತನಿಗೆ ಇಪ್ಪತೈದು ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

Last Updated : Sep 27, 2020, 8:59 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.