ಹಾನಗಲ್ (ಹಾವೇರಿ): ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಚಿಕ್ಕೇರಿಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. 52 ವರ್ಷದ ರೈತ ಚಂದ್ರಪ್ಪ ಜನಗೇರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಜಮೀನಿನಲ್ಲಿ ನೀರು ಹಾಯಿಸಲು ಬೋರ್ವೆಲ್ ಸ್ಟಾರ್ಟ್ ಮಾಡಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಹಾನಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳೆಯಾಗುತ್ತಿದ್ದ ಸಂದರ್ಭ ಶಾರ್ಟ್ ಸರ್ಕ್ಯೂಟ್ಗೆ ರೈತ ಬಲಿಯಾಗಿರಬಹುದು ಎನ್ನಲಾಗಿದೆ.