ಹಾವೇರಿ : ಅಸಪರ್ಕಕ ವಿದ್ಯುತ್ ಪೂರೈಕೆ ಖಂಡಿಸಿ ಜಿಲ್ಲೆಯ ರಟ್ಟಿಹಳ್ಳಿ ರೈತರು ಪ್ರತಿಭಟನೆ ನಡೆಸಿದರು.
ರಟ್ಟಿಹಳ್ಳಿಯ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕಿ ರೈತರು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಹೆಸ್ಕಾಂ ಅಧಿಕಾರಿಗಳು ರೈತರಿಗೆ ವಿತರಿಸಬೇಕಾಗಿದ್ದ ವಿದ್ಯುತ್ ಸಾಮಗ್ರಿಗಳನ್ನು ಸರಿಯಾಗಿ ವಿತರಿಸುತ್ತಿಲ್ಲ ಎಂದು ಆರೋಪಿಸಿ, ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಈ ಬಾರಿ ಮಳೆ ಪ್ರಮಾಣ ಹೆಚ್ಚಾಗಿದ್ದು ನೀರಿದೆ. ಆದರೆ ಅದನ್ನು ಬಳಸಿಕೊಳ್ಳಲು ಸಮರ್ಪಕ ವಿದ್ಯುತ್ ಪೂರೈಸುತ್ತಿಲ್ಲ, ಇದರಿಂದ ಇದ್ದ ನೀರನ್ನು ಬಳಸಿಕೊಳ್ಳಲಾರದಂತಹ ಸ್ಥಿತಿಯಲ್ಲಿ ರೈತರಿದ್ದಾರೆ. ಆದ ಕಾರಣ ಹೆಸ್ಕಾಂ ಮೇಲಾಧಿಕಾರಿಗಳು ಸಮರ್ಪಕ ವಿದ್ಯುತ್ ಪೂರೈಸುವಂತೆ ಆದೇಶ ನೀಡಬೇಕು ಎಂದು ರೈತರು ಆಗ್ರಹಿಸಿದರು.