ಹಾವೇರಿ: ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ, ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು 51ವರ್ಷದ ವೀರನಗೌಡ ಪಾಟೀಲ್ ಎಂದು ಗುರುತಿಸಲಾಗಿದೆ. 6 ಎಕರೆ ಜಮೀನು ಹೊಂದಿದ್ದ ವೀರನಗೌಡ 11 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದ. ಬಿತ್ತಿದ್ದ ಮೆಕ್ಕೆಜೋಳದ ಬೆಳೆ ಹಾಳಾಗಿದ್ದರಿಂದ ಬೇಸತ್ತು ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ರೈತನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ. ಶಾಸಕ ಬಿ.ಸಿ.ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿ, ಮೃತನ ಕುಟುಂಬದವರಿಗೆ ಸಾಂತ್ವನ ಹೇಳಿದರು. ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.