ಹಾವೇರಿ: ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ನಿವಾಸಿಯಾದ ನಾಗಪ್ಪ ನಾಯ್ಕರ್ (34) ಮೃತ ರೈತ.
ಕದರಮಂಡಲಗಿ ಗ್ರಾಮದಲ್ಲಿ 2 ಎಕರೆ 32 ಗುಂಟೆ ಜಮೀನು ಹೊಂದಿದ್ದ ರೈತ, ಬ್ಯಾಂಕ್ ಮತ್ತು ಕೈಸಾಲ ಅಂತಾ ಐದೂವರೆ ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಆದರೆ, ಕೆಲವು ವರ್ಷಗಳಿಂದ ಎದುರಾದ ಬರಗಾಲ ಮತ್ತು ಹತ್ತಿ, ಮೆಕ್ಕೆಜೋಳದ ಬೆಳೆ ಕೈಕೊಟ್ಟಿದ್ದರಿಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದ್ದು, ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.