ಹಾವೇರಿ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಅಜ್ಞಾನಿ ಅಂದಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದ ಕಾರ್ಯಕರ್ತರು, ಬಿ.ಸಿ.ಪಾಟೀಲ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ರೈತರ ಪರವಾಗಿ ಸದಾ ಹೋರಾಟ ಮಾಡುತ್ತಿರುವ ಕೋಡಿಹಳ್ಳಿ ಚಂದ್ರಶೇಖರ್ ಬಗ್ಗೆ ಹಗುರವಾಗಿ ಮಾತನಾಡೋದನ್ನು ನಿಲ್ಲಿಸಬೇಕು.
ಕೂಡಲೇ ಬಿ.ಸಿ.ಪಾಟೀಲ್ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.