ETV Bharat / state

ಇನ್ನೂ ಸಿಕ್ಕಿಲ್ಲ ಭೂಮಿ ಕಳೆದುಕೊಂಡವರಿಗೆ ಪರಿಹಾರ: ಓವರ್​ ಟ್ಯಾಂಕ್​ ಏರಿ ರೈತರಿಂದ ಆತ್ಮಹತ್ಯಾ ಯತ್ನ!

ತುಂಗಾ ಮೇಲ್ದಂಡೆ ಯೋಜನೆ ಕಾಲುವೆ ನಿರ್ಮಾಣದ ವೇಳೆ ಭೂಮಿ ಕಳೆದುಕೊಂಡ ರೈತರು ಪರಿಹಾರಕ್ಕಾಗಿ ಒತ್ತಾಯಿಸಿ ಓವರ್ ಟ್ಯಾಂಕ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಣೆಬೆನ್ನೂರಿನಲ್ಲಿ ನಡೆದಿದೆ.

Farmers
ರೈತರು
author img

By

Published : Mar 18, 2020, 8:46 PM IST

ರಾಣೆಬೆನ್ನೂರು: ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆ ನಿರ್ಮಾಣದ ವೇಳೆ ಭೂಮಿ ಕಳೆದುಕೊಂಡ ರೈತರು ಪರಿಹಾರಕ್ಕಾಗಿ ಓವರ್ ಟ್ಯಾಂಕ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಮಾಗೋಡ ಗ್ರಾಮದ ತುಂಗಾ ಮೇಲ್ದಂಡೆ ಕಚೇರಿ ಬಳಿ ನಡೆದಿದೆ.

ಓವರ್ ಟ್ಯಾಂಕ್ ಏರಿ ರೈತರಿಂದ ಆತ್ಮಹತ್ಯೆ ಯತ್ನ

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆ ನಿರ್ಮಾಣಕ್ಕಾಗಿ ರೈತರು ನೂರಾರು ಎಕರೆ ಭೂಮಿ ಕಳೆದುಕೊಂಡಿದ್ದರು. ಇದಕ್ಕೆ ಸೂಕ್ತ ಪರಿಹಾರಕ್ಕಾಗಿ ರೈತರು ಕಳೆದ ಒಂದು ತಿಂಗಳಿಂದ ಹೋರಾಟ ನಡೆಸುತ್ತಿದ್ದರೂ ಯಾವುದೇ ಪರಿಹಾರ ದೊರೆತಿಲ್ಲ. ಕಾಲುವೆ ನಿರ್ಮಾಣದಿಂದಾಗಿ ಹಿರೇಕೆರೂರು, ರಟ್ಟೀಹಳ್ಳಿ ಮತ್ತು ರಾಣೆಬೆನ್ನೂರು ತಾಲೂಕಿನ 800 ರೈತರಿಗೆ 52 ಕೋಟಿ ರೂಪಾಯಿ ಪರಿಹಾರ ನೀಡಬೇಕಾಗಿತ್ತು.

ಈ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ನಾಲ್ವರು ರೈತರು ತುಂಗಾ ಮೇಲ್ದಂಡೆ ಯೋಜನಾ ಕಚೇರಿ ಆವರಣದಲ್ಲಿರುವ ನೀರಿನ ಟ್ಯಾಂಕ್ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸರು ರೈತರನ್ನು ಓವರ್​ ಟ್ಯಾಂಕ್​​ನಿಂದ ಕೆಳಗಿಳಿಸಲು ಹರಸಾಹಸಪಟ್ಟರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.