ಹಾವೇರಿ: ರೈತ ಸಂಪರ್ಕ ಕೇಂದ್ರದಲ್ಲಿ ಕಳಪೆ ಬಿತ್ತನೆ ಬೀಜ ವಿತರಣೆಯಾಗಿವೆ ಎಂದು ಆರೋಪಿಸಿ, ಜಿಲ್ಲಾ ಕೃಷಿ ಇಲಾಖೆ ಕಚೇರಿ ಮುಂದೆ ರೈತರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಕಳಪೆ ಬೀಜದಿಂದ ನಷ್ಟ ಅನುಭವಿಸಿದ ರಾಣೆಬೆನ್ನೂರು ತಾಲೂಕಿನ ಹೆಡಿಯಾಲ ಗ್ರಾಮದ ರೈತರು, ಜಿಲ್ಲಾಡಳಿತ ಸಂಕಿರ್ಣ ಕಟ್ಟಡದಲ್ಲಿರುವ ಕೃಷಿ ಇಲಾಖೆ ಕಚೇರಿ ಮುಂದೆಯೇ ಧರಣಿ ನಡೆಸಿದ್ದಾರೆ.
ಸುಮಾರು ಎರಡು ನೂರು ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ ಸಂಪೂರ್ಣ ಹಾನಿಯಾಗಿದೆ ಎಂದು ರೈತರು ಆರೋಪಿಸಿದ್ದು, ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದ್ದಾರೆ. ಪರಿಹಾರ ಸಿಗುವವರೆಗೂ ಕೃಷಿ ಇಲಾಖೆ ಕಚೇರಿ ಮುಂಭಾಗದಿಂದ ಹೋಗದಿರಲು ನಿರ್ಧರಿಸಿದ್ದಾರೆ.