ETV Bharat / state

ಹಾವೇರಿಯಲ್ಲಿ ರೈತರ ಪ್ರತಿಭಟನೆ: ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ

author img

By

Published : Jan 28, 2020, 7:46 PM IST

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಹಾವೇರಿಯಲ್ಲಿ ಕರ್ನಾಟಕ ರೈತ ಸಂಘ ಮತ್ತು ಹಸಿರುಸೇನೆಯ ವತಿಯಿಂದ ಬೃಹತ್​ ಪ್ರತಿಭಟನೆ ನಡೆಸಲಾಯಿತು.

Farmers' protest in Haveri
ಹಾವೇರಿಯಲ್ಲಿ ರಸ್ತೆ ತಡೆ ನಡೆಸಿ ರೈತರ ಪ್ರತಿಭಟನೆ

ಹಾವೇರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಮುರುಘರಾಜೇಂದ್ರ ಮಠದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು, ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ರಸ್ತೆ ತಡೆ ನಡೆಸಿದರು.

ಜಿಲ್ಲಾಡಳಿತ ಹಾಗೂ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿವೆ. ಜಿಲ್ಲೆಯ ರೈತರಿಗೆ ಕಳೆದ ನಾಲ್ಕು ವರ್ಷಗಳಿಂದ ಬೆಳೆ ವಿಮೆ ಸಿಕ್ಕಿಲ್ಲ. ಜೊತೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಾವೇರಿಯಲ್ಲಿ ರಸ್ತೆ ತಡೆ ನಡೆಸಿ ರೈತರ ಪ್ರತಿಭಟನೆ

ಕಿಸಾನ್ ಸಮ್ಮಾನ್ ಎಂಬುದು, ಕಿಸಾನ್​ ಅವಮಾನ್ ಎಂಬಂತಾಗಿದೆ. ಜಿಲ್ಲಾಡಳಿತ ಎಚ್ಚೆತ್ತುಕೊಂಡು ರೈತರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು. ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಉಗ್ರವಾಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ್, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.

Intro:KN_HVR_02_FARMER_PROTEST_SCRIPT_7202143
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾವೇರಿಯಲ್ಲಿ ಜಿಲ್ಲಾ ರೈತ ಸಂಘ ಮತ್ತು ಹಸಿರು ಸೇನೆ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ಅಂಗವಾಗಿ ನಗರದ ಮುರುಘರಾಜೇಂದ್ರಮಠದಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲೆಯ ರೈತರು ಪಾಲ್ಗೊಂಡಿದ್ದರು. ನಂತರ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ರಸ್ತೆ ತಡೆ ನಡೆಸಿದ ರೈತರು ಜಿಲ್ಲಾಡಳಿತ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಜಿಲ್ಲಾಡಳಿತ ಮತ್ತು ಸರ್ಕಾರಗಳು ರೈತರ ವಿರೋಧಿನೀತಿ ಅನುಸರಿಸುತ್ತೀವೆ ಎಂದು ಆರೋಪಿಸಿದರು. ಜಿಲ್ಲೆಯ ರೈತರಿಗೆ ಕಳೆದ ನಾಲ್ಕು ವರ್ಷಗಳಿಂದ ಬೆಳೆವಿಮೆ ಸಿಕ್ಕಿಲ್ಲ. ಬೆಳೆಹಾನಿ ಪರಿಹಾರ ಸಿಕ್ಕಿಲ್ಲ ಪ್ರಧಾನಮಂತ್ರಿ ಘೋಷಣೆ ಮಾಡಿದ ಕಿಸಾನ್ ಸಮ್ಮಾನ್ ಯೋಜನೆ ಜಾರಿಯಾಗಿಲ್ಲಾ ಎಂದು ಆರೋಪಿಸಿದರು. ಕಿಸಾನ ಸಮ್ಮಾನ ಬದಲಿಗೆ ಅದು ಕಿಸಾನ ಅವಮಾನ್ ಎಂಬಂತಾಗಿದೆ ಎಂದು ಆರೋಪಿಸಿದರು. ಜಿಲ್ಲಾಡಳಿತ ಎಚ್ಚೆತ್ತುಕೊಂಡು ಈಗಲಾದರು ತಮ್ಮ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಉಗ್ರವಾಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ್, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.
LOOK...........,
BYTE-01ಮಲ್ಲಿಕಾರ್ಜುನ ಬಳ್ಳಾರಿ, ರೈತ ಸಂಘದ ಪ್ರಧಾನ ಕಾರ್ಯದರ್ಶಿBody:sameConclusion:same
ETV Bharat Logo

Copyright © 2024 Ushodaya Enterprises Pvt. Ltd., All Rights Reserved.