ಹಾವೇರಿ: ಜಿಲ್ಲಾ ಕೇಂದ್ರದಲ್ಲಿನ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಡಿಸಲಾಗಿದೆ. ಜಿಲ್ಲಾಸ್ಪತ್ರೆಯನ್ನು ಕೇವಲ ತುರ್ತುಚಿಕಿತ್ಸೆಗಳಿಗಾಗಿ ಮೀಸಲಾಗಿಟ್ಟಿದ್ದು, ಅಪಘಾತ ಮತ್ತು ಎಮರ್ಜೆನ್ಸಿ ಕೇಸ್‌ಗಳಿಗೆ ಮಾತ್ರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಉಳಿಂದಂತೆ ಹಾವೇರಿ ಕನ್ನಡ ಪ್ರೌಢಶಾಲೆಯಲ್ಲಿ ದೈನಂದಿನ ರೋಗಿಗಳಿಗಾಗಿ ಫೀವರ್ ಕ್ಲಿನಿಕ್ ತೆರೆಯಲಾಗಿದೆ. ಇಲ್ಲಿಯೇ ಸಾಮಾನ್ಯ ರೋಗಿಗಳ ತಪಾಸಣೆ ಮಾಡುತ್ತಿದ್ದು, ದೂರ ದೂರದ ಊರುಗಳಿಂದ ಆಗಮಿಸುತ್ತಿರುವ ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾತ್ಕಾಲಿಕವಾಗಿ ಜಿಲ್ಲಾಸ್ಪತ್ರೆಯ ಎಲ್ಲ ವಿಭಾಗಗಳನ್ನು ಇಲ್ಲಿ ತೆರೆಯಲಾಗಿದೆ. ಶಸ್ತ್ರಚಿಕಿತ್ಸೆ ಮತ್ತು ಒಳರೋಗಿಗಳಾಗಿ ಸೇರ್ಪಡೆಗೆ ಮಾತ್ರ ಜಿಲ್ಲಾಸ್ಪತ್ರೆಗೆ ಕಳಿಸಿಕೊಡಲಾಗುತ್ತಿದೆ.
ಕೊರೊನಾ ಮುಕ್ತವಾಗುವರೆಗೂ ಇದೇ ಪದ್ದತಿಯನ್ನು ಮುಂದುವರೆಸುವ ಇಂಗಿತವನ್ನು ಆರೋಗ್ಯಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ.