ETV Bharat / state

ಹಾವೇರಿ: ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ತಗುಲಿ ಧಗ ಧಗನೇ ಹೊತ್ತಿ ಉರಿಯಿತು ಮನೆ! - fire on house in haveri

ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ ಹೊರ ವಲಯದಲ್ಲಿ ಶಾರ್ಟ್ ಸರ್ಕ್ಯೂಟ್​​​ನಿಂದ‌ ಬೆಂಕಿ ತಗುಲಿ ಮನೆಯೊಂದು ಹೊತ್ತಿ ಉರಿದು ಸುಟ್ಟು ಕರಕಲಾಗಿದೆ.

fire on house in haveri
ಹಾವೇರಿಯಲ್ಲಿ ಮನೆಗೆ ಬೆಂಕಿ
author img

By

Published : Mar 23, 2022, 9:31 AM IST

ಹಾವೇರಿ: ಶಾರ್ಟ್ ಸರ್ಕ್ಯೂಟ್​​​ನಿಂದ‌ ಬೆಂಕಿ ತಗುಲಿ ಮನೆಯೊಂದು ಹೊತ್ತಿ ಉರಿದ ಘಟನೆ ನಿನ್ನೆ ರಾತ್ರಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಶಂಕ್ರಪ್ಪ ತೆರೆದಹಳ್ಳಿ ಎಂಬುವರಿಗೆ ಸೇರಿದ ಮನೆ ಹೊತ್ತಿ ಉರಿದು ಸುಟ್ಟು ಕರಕಲಾಗಿದೆ.

ಹೊತ್ತಿ ಉರಿದ ಮನೆ!

ಇದನ್ನೂ ಓದಿ: ಜೆಸಿಬಿಯಿಂದ ಕಾಡಾನೆಗಳನ್ನು ಹಿಂಸಿಸಿ ವಿಕೃತಿ ಮೆರೆದ ಕಿಡಿಗೇಡಿಗಳು: ವಿಡಿಯೋ ವೈರಲ್​

ಮನೆಯಲ್ಲಿದ್ದ ಮೂರು ಜಾನುವಾರುಗಳು ಸಜೀವ ದಹನವಾಗಿವೆ. ಅಲ್ಲದೇ ಮನೆಯಲ್ಲಿದ್ದ ನಗದು ಸೇರಿದಂತೆ ಎಲ್ಲ ವಸ್ತುಗಳು ಸುಟ್ಟು ಕರಕಲಾಗಿವೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಅಗ್ನಿ ಅವಘಡ ಸಂಭವಿಸಿದ್ದು, ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿತು. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.