ರಾಣೆಬೆನ್ನೂರು: ಈ ಉಪಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ. ಬಿಜೆಪಿ ಧರ್ಮ, ಜಾತಿ ಅಷ್ಟೇ ಏಕೆ ಸತ್ತ ಮನೆಯಲ್ಲಿಯೂ ರಾಜಕೀಯ ಮಾಡುತ್ತದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಕಿಡಿಕಾರಿದ್ದಾರೆ.
ರಾಣೆಬೆನ್ನೂರು ಕ್ಷೇತ್ರದ ಉಪಚುನಾವಣೆ ಪ್ರಚಾರಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿ ಮಾತನಾಡಿದ ಅವರು, ಉಪಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದಿಲ್ಲ. ಉಪಚುನಾವಣೆ ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಲಿದೆ. ಮೂರೂವರೆ ತಿಂಗಳಲ್ಲಿ ಬಿಜೆಪಿಯವರು ಏನು ಮಾಡಿದ್ದಾರೆ? ಜನರ ಬಳಿ ಏನು ಅಂತಾ ಮತ ಕೇಳ್ತಾರೆ? ಎಂಬುದು ತಿಳಿಯುತ್ತಿಲ್ಲ ಎಂದು ವ್ಯಂಗ್ಯವಾಡಿದರು.
ಉಪಚುನಾವಣೆ ಬಳಿಕ ಕೈ-ಜೆಡಿಎಸ್ ಮೈತ್ರಿ ವಿಚಾರ ಹೈಕಮಾಂಡ್ಗೆ ಬಿಟ್ಟ ವಿಚಾರ. ಈ ಚುನಾವಣೆಯಲ್ಲಿ ಸ್ವಾಭಿಮಾನದ ಫಲವಾಗಿ ಜನ ಉತ್ತರ ಕೊಡ್ತಾರೆ. ಕೋಳಿವಾಡರ ಗೆಲುವೇ, ಸಿದ್ದರಾಮಯ್ಯನವರ ಗೆಲುವು ಎಂದು ಅಭಿಪ್ರಾಯಪಟ್ಟರು.