ETV Bharat / state

ಹಾವೇರಿಯಲ್ಲಿ ಮತ್ತೆ 4 ಕೊರೊನಾ ಕೇಸ್​​ ಪತ್ತೆ: ಒಂದೇ ಕುಟುಂಬದವರಲ್ಲಿ ಸೋಂಕು! - Haveri Corona

ಹಾವೇರಿ ಜಿಲ್ಲೆಯಲ್ಲಿ ಮತ್ತೆ ನಾಲ್ಕು ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರಿಗೆ ಕೋವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊರೊನಾ ಪ್ರಕರಣ ಪತ್ತೆ
ಕೊರೊನಾ ಪ್ರಕರಣ ಪತ್ತೆ
author img

By

Published : May 30, 2020, 11:33 AM IST

ಹಾವೇರಿ: ನಾಲ್ಕು ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಜಿಲ್ಲೆಯಲ್ಲಿ ದೃಢಪಟ್ಟಿವೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯಿಂದ ಬಂದಿರುವ ಒಂದೇ ಕುಟುಂಬದ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರು ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿಗ ಗ್ರಾಮದವರು. 11 ವರ್ಷ, 13 ವರ್ಷ, 15 ವರ್ಷ ಹಾಗೂ 19 ವರ್ಷದ ಗಂಡು ಮಕ್ಕಳಲ್ಲಿ ಸೋಂಕಿರುವುದು ಪತ್ತೆಯಾಗಿದೆ. ಇವರು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪಾಂಡಪಾಡ್ವಾದ ಕಲ್ವಾದಲ್ಲಿ ಬೀದಿಬದಿ ವ್ಯಾಪಾರ ಮಾಡಿಕೊಂಡಿದ್ದವರು. ಆದರೆ ತಮ್ಮ ಕುಟುಂಬ ಸದಸ್ಯರ ಜೊತೆ ಮೇ 17ರಂದು ಜಿಲ್ಲೆಗೆ ಆಗಮಿಸಿದ್ದು, ಸಾಂಸ್ಥಿಕ ಕ್ವಾರಂಟೈನ್​ನಲ್ಲಿದ್ದರು.

ಕೊರೊನಾ ಪ್ರಕರಣ ಪತ್ತೆ

ಸದ್ಯ ಸೋಂಕಿತ ನಾಲ್ವರನ್ನ ಕೋವಿಡ್-19 ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 11 ಸಕ್ರಿಯ ಪ್ರಕರಣಗಳಿದ್ದು, ಮೂವರು ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.