ಹಾವೇರಿ: ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಜನರು ಬೆಳಿಗ್ಗೆಯಿಂದಲೇ ಗಣೇಶನ ಮೂರ್ತಿಗಳನ್ನು ಖರೀದಿಸಿ ಮನೆಗೆ ತೆಗೆದುಕೊಂಡು ಹೋಗುತ್ತಿದ್ದ ದೃಶ್ಯ ಕಂಡುಬಂತು.
ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ ಪೊಲೀಸರೂ ಸಹ ತೆರೆದ ವಾಹನದಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆಗೆ ತೆಗೆದುಕೊಂಡು ಹೋದರು. ಕೊರೊನಾ ಭೀತಿ ಇರೋದ್ರಿಂದ ಈ ವರ್ಷ ಸಾರ್ವಜನಿಕ ಮೆರವಣಿಗೆಗೆ ಅವಕಾಶವಿಲ್ಲ. ಹೀಗಾಗಿ ಸರಳವಾಗಿ ಜನರು ಗಣೇಶೋತ್ಸವ ಆಚರಿಸುತ್ತಿದ್ದಾರೆ.
ಗಣೇಶನ ಹಬ್ಬಕ್ಕಾಗಿ ಮಾರುಕಟ್ಟೆಯಲ್ಲಿ ತರಹೇವಾರಿ ಬಣ್ಣಬಣ್ಣದ ವಿಘ್ನ ವಿನಾಯಕನ ಮೂರ್ತಿಗಳು ಕಂಡುಬಂದವು. ಜನರು ನಿರ್ಬಂಧಗಳನ್ನು ಪಾಲಿಸುತ್ತಾ ತಮ್ಮ ಇತಿಮಿತಿಯೊಳಗೆ ಹಬ್ಬ ಆಚರಿಸುತ್ತಿದ್ದಾರೆ.