ಹಾವೇರಿ: ಹಾಸ್ಟೆಲ್ ಕಟ್ಟಡದ ಮೇಲಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಬಿಸಿಎಂ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ.
ಕಾವ್ಯಾ ಬೆನ್ನೂರ(16) ಮೃತ ವಿದ್ಯಾರ್ಥಿನಿ. ಕಾವ್ಯ, ನಗರದ ರಾಜರಾಜೇಶ್ವರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಪರೀಕ್ಷೆ ಇದ್ದ ಕಾರಣ ಮುಂಜಾನೆ ಬೇಗನೆ ಎದ್ದು ಶೌಚಾಲಯಕ್ಕೆ ಹೋದಾಗ ಆಯತಪ್ಪಿ ಬಿದ್ದಿದ್ದಾಳೆ ಎನ್ನಲಾಗಿದೆ. ರಾಣೆಬೆನ್ನೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.