ಹಾವೇರಿ: ನಗರದ ಹೊರವಲಯದಲ್ಲಿರುವ ಅಜ್ಜಯ್ಯ ಗುಡಿ ಚೆಕ್ ಪೋಸ್ಟ್ ಬಳಿ ಚುನಾವಣಾ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, 6 ಕೋಟಿ 90 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಉತ್ತರ ಕನ್ನಡದ ಪ್ರಮುಖ ಅಭ್ಯರ್ಥಿಗಳೆಲ್ಲರೂ ಕೋಟ್ಯಧಿಪತಿಗಳೇ: ಆರ್.ವಿ.ದೇಶಪಾಂಡೆ ಆಸ್ತಿ ₹299 ಕೋಟಿ
ಹುಬ್ಬಳ್ಳಿಯಿಂದ ಹಾವೇರಿ ಮತ್ತು ದಾವಣಗೆರೆಯ ಚಿನ್ನದ ಅಂಗಡಿಗಳಿಗೆ ಚಿನ್ನ ಮತ್ತು ಬೆಳ್ಳಿಯ ಆಭರಣಗಳ ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. 11 ಕೆ.ಜಿಯಷ್ಟು ಚಿನ್ನ, 70 ಕೆಜಿಯಷ್ಟು ಬೆಳ್ಳಿಯ ಆಭರಣಗಳನ್ನು ಸಾಗಿಸುತ್ತಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಆಭರಣಗಳನ್ನು ಖರೀದಿಸಿದ ಬಿಲ್ಗಳು ದೊರೆತಿದ್ದು, ಚುನಾವಣೆ ಅಧಿಕಾರಿಯಿಂದ ಯಾವುದೇ ಅನುಮತಿಯನ್ನು ಪಡೆದಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ ಸ್ಪರ್ಧಿಸಲಿ, ರೈತ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿಕೊಳ್ತೀನಿ: ಹೆಚ್ಡಿಕೆ
ನಿಖರವಾಗಿ ಈ ಚಿನ್ನಾಭರಣಗಳನ್ನು ಯಾವ ಊರಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಎನ್ನುವ ದಾಖಲೆಯಿಲ್ಲ. ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸಮಿತಿಗೆ ಈ ಚಿನ್ನಾಭರಣಗಳನ್ನು ವರ್ಗಾಯಿಸಲಾಗಿದೆ. ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆ ನಡೆಸುತ್ತಿದೆ.
ಇದನ್ನೂ ಓದಿ: ಸಂವಾದದಲ್ಲಿ ಮೋದಿ ಕೊಂಡಾಡಿದ ನಡ್ಡಾ: ಶೆಟ್ಟರ್ ಟಿಕೆಟ್ ಕುರಿತ ನಿರ್ಧಾರಕ್ಕೆ ಸಮರ್ಥನೆ
ಇದನ್ನೂ ಓದಿ: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮವಿಲ್ಲ: ಆರಗ ಜ್ಞಾನೇಂದ್ರ