ಹಾವೇರಿ : ಲಾಕ್‌ಡೌನ್‌ಗೆ ಹಾವೇರಿಯಲ್ಲಿ ದಿನದಿಂದ ದಿನಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಜಿಲ್ಲೆಯ ತರಕಾರಿ ಮಾರುಕಟ್ಟೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ.
ಬಹುತೇಕರು ಮಾಸ್ಕ್ ಧರಿಸಿ ಸಂಚರಿಸುತ್ತಿದ್ದಾರೆ. ಅಗತ್ಯವಾದರೆ ಮಾತ್ರ ಮನೆಯಿಂದ ಹೊರಗೆ ಬರುವ ಜನ ತಮಗೆ ಅವಶ್ಯಕ ವಸ್ತುಗಳನ್ನು ಖರೀದಿಸಿ ಮನೆಗೆ ಮರಳುತ್ತಿದ್ದಾರೆ. ಮಾರುಕಟ್ಟೆ, ಜನ ಸೇರುವ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡುವ ಬಾಕ್ಸ್ ಹಾಕಲಾಗಿದೆ.