ಹಾವೇರಿ: ಭಾರತ ಲಾಕ್ ಡೌನ್ಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರಿಗಳು, ಗ್ರಾಹಕರು ತರಕಾರಿ ಮಾರಾಟ ಮತ್ತು ಖರೀದಿ ಮಾಡುತ್ತಿದ್ದ ದೃಶ್ಯ ಕಂಡುಬಂತು.
ಮನೆ ಬಿಟ್ಟು ಅನಗತ್ಯವಾಗಿ ಹೊರಗೆ ಓಡಾಡೋರಿಗೆ ದಂಡ ಹಾಕುವ ಪೊಲೀಸರು ವಾಹನ ಸವಾರರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ದಿನಸಿ, ತರಕಾರಿ ಹೊರತುಪಡಿಸಿ ಎಲ್ಲಾ ಅಂಗಡಿಗಳು ವ್ಯಾಪಾರ ಸ್ಥಗಿತಗೊಳಿಸಿವೆ. ಹೋಲ್ ಸೇಲ್ ತರಕಾರಿ ಮಾರುಕಟ್ಟೆಯಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡುತ್ತಿದ್ದಾರೆ.
ಹಾಗೆಯೇ ವಿನಾಕಾರಣ ಮನೆಯಿಂದ ಹೊರಗೆ ಬರಬೇಡಿ. ಹೊರಗೆ ಬರಬೇಕಾದ ಅನಿವಾರ್ಯತೆ ಇದ್ದರೆ ಮಾಸ್ಕ್ ಧರಿಸಿ ಬಂದು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಸೂಚಿಸಲಾಗುತ್ತಿದೆ.