ETV Bharat / state

ಲಾಕ್​ಡೌನ್​ಗೆ ರಾಣೆಬೆನ್ನೂರಲ್ಲಿ ಉತ್ತಮ ಪ್ರತಿಕ್ರಿಯೆ: ನಗರ ಸಂಪೂರ್ಣ ಸ್ತಬ್ಧ - Great response to the lockdown

ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಜಿಲ್ಲೆಯಾದ್ಯಂತ ಇಂದು ನಿಷೇಧಾಜ್ಞೆ ಹೊರಡಿಸಿದ್ದಾರೆ. ಅದರಂತೆ ರಾಣೆಬೆನ್ನೂರಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ನಗರ ಸಂಪೂರ್ಣ ಸ್ತಬ್ಧವಾಗಿದೆ.

Ranebennuru
ಲಾಕ್​ಡೌನ್​ಗೆ ಉತ್ತಮ ಪ್ರತಿಕ್ರಿಯೆ
author img

By

Published : Jul 5, 2020, 5:26 PM IST

ರಾಣೆಬೆನ್ನೂರು: ಸರ್ಕಾರದ ಆದೇಶದಂತೆ ರವಿವಾರದ ಲಾಕ್​ಡೌನ್​ಗೆ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ನಗರ ಸಂಪೂರ್ಣ ಸ್ತಬ್ಧವಾಗಿದೆ.

ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಜಿಲ್ಲೆಯಾದ್ಯಂತ ಇಂದು ನಿಷೇಧಾಜ್ಞೆ ಹೊರಡಿಸಿದ್ದರು. ಇದರ ಹಿನ್ನೆಲೆಯಲ್ಲಿ ನಗರದ ಬಹುತೇಕ ಕಡೆ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ‌ಅಲ್ಲದೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಯಾವುದೇ ವಾಹನ ಸಂಚಾರ ಇಲ್ಲದ ಕಾರಣ ರಸ್ತೆ ಬಿಕೋ ಎನ್ನುತ್ತಿದೆ.

ಲಾಕ್​ಡೌನ್​ಗೆ ರಾಣೆಬೆನ್ನೂರಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ.

ಲಾಕ್​ಡೌನ್ ಶನಿವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆ 5 ರವರೆಗೆ ಇರುವುದರಿಂದ ಮದ್ಯದಂಗಡಿಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಅಗತ್ಯ ವಸ್ತುಗಳಾದ ದಿನಸಿ, ಹಾಲು, ಪೇಪರ್ ಮತ್ತು ಔಷಧಿ ಅಂಗಡಿಗಳು ಸೇರಿದಂತೆ ತುರ್ತು ಸೇವೆಗಳು ಎಂದಿನಂತೆ ದೊರೆಯುತ್ತಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.