ರಾಣೆಬೆನ್ನೂರ: ಸರ್ಕಾರದ ಆದೇಶದಂತೆ ಸಂಡೇ ಲಾಕಡೌನ್ ಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ನಗರ ಸ್ಥಬ್ಧವಾಗಿದೆ.
ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಜಿಲ್ಲೆಯಾದ್ಯಂತ ರವಿವಾರ ನಿಷೇಧಾಜ್ಞೆ ಹೊರಡಿಸಿದ್ದರು. ಇದರ ಹಿನ್ನೆಲೆಯಲ್ಲಿ ನಗರದ ಬಹುತೇಕ ಕಡೆ ಎಲ್ಲಾ ಅಂಗಡಿ-ಮುಗ್ಗಟ್ಟಗಳನ್ನು ಬಂದ್ ಮಾಡಲಾಗಿತ್ತು. ಅಲ್ಲದೆ ರಾಷ್ಟ್ರೀಯ ಹೆದ್ದಾರಿ -4 ರಲ್ಲಿ ಯಾವುದೇ ವಾಹನ ಸಂಚಾರ ಇಲ್ಲದ ಕಾರಣ ರಸ್ತೆಗಳು ಬೀಕೊ ಎನ್ನುತ್ತಿದ್ದವು.
ಲಾಕಡೌನ್ ಬೆಳಿಗ್ಗೆ 7 ರಿಂದ ಸಂಜೆ 7ರ ವರೆಗೆ ಇರುವುದರಿಂದ ಮದ್ಯದಂಗಡಿ ಸಂಪೂರ್ಣ ಬಂದ್ ಮಾಡಲಾಗಿತ್ತು. ಅಗತ್ಯ ವಸ್ತುಗಳಾದ ದಿನಸಿ, ಹಾಲು, ಪೇಪರ್ ಮತ್ತು ಔಷಧಿ ಅಂಗಡಿಗಳು ಸೇರಿದಂತೆ ತುರ್ತುಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸದವು.