ಹಾವೇರಿ: ಪ್ರವಾಹ ಪರಿಸ್ಥಿತಿ ವೇಳೆ ರಜೆ ನೀಡಿದ್ದ ಹಿನ್ನೆಲೆ ಈಗ ಶನಿವಾರ ಮತ್ತು ಭಾನುವಾರ ಕೂಡ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುವಂತೆ ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶಿಸಿದ್ದಾರೆ.
ಜಿಲ್ಲಾಡಳಿತ ಕಚೇರಿಯಲ್ಲಿ ಮಾತನಾಡಿದ ಅವರು ನೆರೆ ಹಾವಳಿಯಿಂದ ರಜೆ ನೀಡಲಾಗಿತ್ತು. ಆ ರಜೆಗಳ ಭರ್ತಿಗಾಗಿ ಈಗ ಶನಿವಾರ ಮತ್ತು ರವಿವಾರ ಎರಡು ದಿನಗಳು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಶನಿವಾರ ಮತ್ತು ಭಾನುವಾರ ಸಹ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಿದ್ದಾರೆ. ಈ ಆದೇಶ ಉಲ್ಲಂಘಿಸಿದರೆ ಅಂತಹ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಎಚ್ಚರಿಕೆ ನೀಡಿದ್ದಾರೆ.