ETV Bharat / state

ಪರೀಕ್ಷೆಯಲ್ಲಿ ಹೆಚ್ಚಿನ ಅಂಕದ ಆಮಿಷ: ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅನುಚಿತ ವರ್ತನೆ - ಹಾವೇರಿ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್​

ಎಸ್ಎಸ್ಎಲ್‌ಸಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕನಾಗಿ ಶಿಕ್ಷಕ ಪರಮೇಶ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ತಿಳಿದುಬಂದಿದೆ.

ಹಾವೇರಿ ಸರ್ಕಾರಿ ಶಾಲಾ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್​ ದಾಖಲು

author img

By

Published : Apr 12, 2022, 5:53 PM IST

ಹಾವೇರಿ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳು ಬರುವಂತೆ ಮಾಡುತ್ತೇನೆಂದು ವಿದ್ಯಾರ್ಥಿನಿ ಜೊತೆ ಶಿಕ್ಷಕರೊಬ್ಬರು ಅನುಚಿತವಾಗಿ ವರ್ತಿಸಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಶಿಕ್ಷಕ 45 ವರ್ಷದ ಪರಮೇಶ ಐರಣಿ ಎಂಬಾತನ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನಾಗಿರುವ ಪರಮೇಶ, ಎಸ್ಎಸ್ಎಲ್‌ಸಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಪರೀಕ್ಷೆ ಆರಂಭವಾದ ದಿನದಿಂದ ವಿದ್ಯಾರ್ಥಿನಿಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದರು ಎನ್ನಲಾಗಿದೆ. ಪೊಲೀಸರು ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಆರೋಪ ಮಾಡಿದ್ಕೂಡಲೇ ಸಾಬೀತಾದಂತಲ್ಲ.. ಯಾರ್‌ ಕೊಟ್ಟಿದ್ದು, ಯಾರ್‌ ತೆಗೆದ್ಕೊಂಡಿದ್ದೆಲ್ಲ ಸಾಬೀತಾಗ್ಬೇಕು, ಆಮೇಲೆ ಕ್ರಮ.. ಆರಗ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.