ETV Bharat / state

ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಬಹಿಷ್ಕರಿಸಿದ ಗ್ರಾಪಂ ಸದಸ್ಯರು

ಮಕರಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಹಿಂದುಳಿದ ಬ ವರ್ಗದ ಮಹಿಳೆಗೆ ಮೀಸಲಾಗಿದೆ. ಆದರೆ ಗ್ರಾಪಂ ಸದಸ್ಯರಲ್ಲಿ ಯಾರೂ ಹಿಂದುಳಿದ ಬ ವರ್ಗಕ್ಕೆ ಸೇರಿದ ಮಹಿಳೆಯರಿಲ್ಲ. ಈ ನಡುವೆಯೇ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುತ್ತಿರುವುದಕ್ಕೆ ಗ್ರಾಪಂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

author img

By

Published : Jan 28, 2021, 5:22 PM IST

Gram panchayat members boycotting election
ಚುನಾವಣೆ ಬಹಿಷ್ಕರಿಸಿದ ಗ್ರಾಪಂ ಸದಸ್ಯರು

ಹಾವೇರಿ: ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಬಹಿಷ್ಕರಿಸಿ ಸದಸ್ಯರು ಪ್ರತಿಭಟನೆ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಕರಿ ಗ್ರಾಮದಲ್ಲಿ ನಡೆದಿದೆ.

ಮಕರಿ ಗ್ರಾಮ ಪಂಚಾಯತ್ ಕಾರ್ಯಾಲಯ

ಮಕರಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಹಿಂದುಳಿದ ಬ ವರ್ಗದ ಮಹಿಳೆಗೆ ಮೀಸಲಾಗಿದೆ. ಆದರೆ ಗ್ರಾಮ ಪಂಚಾಯತ್ ಸದಸ್ಯರಲ್ಲಿ ಯಾರೂ ಹಿಂದುಳಿದ ಬ ವರ್ಗಕ್ಕೆ ಸೇರಿದ ಮಹಿಳೆಯರಿಲ್ಲ. ಆದರೂ ಸಹ ಅಧ್ಯಕ್ಷ ಸ್ಥಾನವನ್ನು ಹಿಂದುಳಿದ ಬ ವರ್ಗದ ಮಹಿಳೆಗೆ ಮೀಸಲಾತಿ ಪ್ರಕಟಿಸಿರುವುದಕ್ಕೆ ಸದಸ್ಯರು ಪ್ರತಿಭಟನೆ ನಡೆಸಿದರು.

ಇನ್ನು ಮೀಸಲಾತಿ ಬದಲಾವಣೆ ಕೋರಿ ಸದಸ್ಯರು ಜಿಲ್ಲಾಧಿಕಾರಿ ಮತ್ತು ಧಾರವಾಡ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಷ್ಟೆಲ್ಲಾ ವಿರೋಧದ ನಡುವೆ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುತ್ತಿರುವುದು ಗ್ರಾಪಂ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದೆ. ಮೀಸಲಾತಿ ಬದಲಾವಣೆ ಮಾಡಿ, ಚುನಾವಣೆ ನಡೆಸುವಂತೆ ಸದಸ್ಯರು ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.