ಹಾವೇರಿ: ವಿಷ ಸೇವಿಸಿ ಗ್ರಾಮ ಪಂಚಾಯ್ತಿ ಸಿಬ್ಬಂದಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಳೆಮೇಲ್ಮುರಿ ಗ್ರಾಮದಲ್ಲಿ ನಡೆದಿದೆ.
ವೀರಪ್ಪ ಮತ್ತೂರ (48) ಮೃತ ಸಿಬ್ಬಂದಿ. ಹಂದಿಗನೂರ ಗ್ರಾಮ ಪಂಚಾಯ್ತಿಯಲ್ಲಿ ವೀರಪ್ಪ ಕೆಲಸ ಮಾಡ್ತಿದ್ದ ಎನ್ನಲಾಗಿದೆ. ಸ್ಥಳಕ್ಕೆ ಗುತ್ತಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.