ಹಾವೇರಿ: ರಾಣೆಬೆನ್ನೂರು ತಾಲೂಕಿನ ಹುಣಸಿಕಟ್ಟಿ ಗ್ರಾಮದ ಆಶಾ ಕಾರ್ಯಕರ್ತೆಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾದ ಹಿನ್ನೆಲೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.
ಗ್ರಾಮದಲ್ಲಿ ಆಶಾಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿರುವ 38 ವರ್ಷದ ಮಹಿಳೆಯೋರ್ವರಿಗೆ ಸೋಂಕಿನ ಲಕ್ಷಣ ಕಂಡು ಬಂದಿದೆ. ಜೂನ್ 30 ರಂದು ತಾಲೂಕು ಆಸ್ಪತ್ರೆ ಸಿಬ್ಬಂದಿ ಆಶಾ ಕಾರ್ಯಕರ್ತೆಯ ಗಂಟಲು ದ್ರವವನ್ನು ಸಂಗ್ರಹಿಸಿ ಲ್ಯಾಬ್ಗೆ ಕಳುಹಿಸಿದ್ದರು. ಮಹಿಳೆಯ ಕೊರೊನಾ ವರದಿ ಜುಲೈ 4 ರಂದು ಬಂದಿದ್ದು, ಸೋಂಕು ಇರುವುದು ದೃಢವಾಗಿದೆ. ಇದರಿಂದ ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಊರಲ್ಲಿ ಮೂರು ದಿನ ಕೆಲಸ ಮಾಡಿದ ಮಹಿಳೆ:
ಆಶಾ ಕಾರ್ಯಕರ್ತೆ ಗಂಟಲು ದ್ರವವನ್ನು ತೆಗೆದುಕೊಂಡು ಪರೀಕ್ಷೆಗೆ ಕಳುಹಿಸಿದ ಮೂರು ದಿನ ಹುಣಸಿಕಟ್ಟಿ ಗ್ರಾಮದಲ್ಲಿ ಕೆಲಸ ಮಾಡಿದ್ದಾರೆ. ಇದರಿಂದ ಇತರರಿಗೆ ಕೊರೊನಾ ಸೋಂಕು ಹರಡಿರಬಹದು ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ತಾಲೂಕು ಆಡಳಿತ ತಕ್ಷಣ ಆಶಾಕಾರ್ಯಕರ್ತೆ ಸಂಪರ್ಕ ಮಾಡಿರುವ ಜನರನ್ನು ಪರೀಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.