ಹಾವೇರಿ: ಕ್ಷುಲ್ಲಕ ಕಾರಣಕ್ಕಾಗಿ ವಿದ್ಯುತ್ ಕಂಬಕ್ಕೆ ಕಟ್ಟಿ ವ್ಯಕ್ತಿಯ ಥಳಿಸಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮೂಕಬಸರಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನ ರಾಮಪ್ಪ ಹರಿಜನ ಎಂದು ಗುರುತಿಸಲಾಗಿದೆ. ಡಿಶ್ ಟಿವಿ ಕೇಬಲ್ ಕತ್ತರಿಸಿದ ಆರೋಪದ ಹಿನ್ನೆಲೆ ವ್ಯಕ್ತಿಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಏರಿಯಾದಲ್ಲಿ ಕೆಇಬಿ ಸಿಬ್ಬಂದಿ ಮರದ ಟೊಂಗೆಗಳನ್ನ ಕತ್ತರಿಸಿ ಹೋಗಿದ್ದಾರೆ. ಅದರ ಜೊತೆಗೆ ಕೇಬಲ್ ಟಿವಿ ವೈಯರ್ ಕತ್ತರಿಸಿ ಹೋಗಿದ್ದಾರೆ. ಆದರೆ ರಾಮಪ್ಪ ಕತ್ತರಿಸಿ ಹೋಗಿದ್ದಾನೆ ಎಂದು ತಪ್ಪಾಗಿ ಭಾವಿಸಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಶಿಗ್ಗಾಂವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈ ಘಟನೆ ಖಂಡಿಸಿ ದಲಿತ ಸಂಘಟನೆಗಳು, ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಶಿಗ್ಗಾಂವಿ ಪೊಲೀಸರು ಪ್ರಕರಣ ಸಂಬಂಧ ಕೂಡಲೇ ಹಲ್ಲೆ ಮಾಡಿದ ನಾಲ್ವರು ಆರೋಪಿಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಗಳನ್ನ ರಬ್ಬಾನಿ ರಾಜೇಸಾಬನವರ್, ಜಹೀರ್ ಆಹ್ಮದ್ ಸವಣೂರು, ಮೋದಿನಸಾಬ್, ಅಹ್ಮದಸಾಬ್ ರಾಜೇಸಾಬನವರ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಹೊಸರಿತ್ತಿ ಲಾಕಪ್ಡೆತ್ ಪ್ರಕರಣ: ನ್ಯಾಯಕ್ಕಾಗಿ ಕುಟುಂಬಸ್ಥರ ಆಗ್ರಹ