ಹಾವೇರಿ: ವಿವಿಧ ಬೇಡಿಕೆ ಈಡೇರಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿಂದು, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪ್ರತಿಭಟನೆ ನಡೆಸಿತು.
ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು, ನಂತರ ಬಿಜೆಪಿ ಕಚೇರಿ ಸಮೀಪ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಬರುವಂತೆ ಪಟ್ಟುಹಿಡಿದರು.
ಓದಿ: ಬಗೆದಷ್ಟು ಬಯಲಾಗುತ್ತಿದೆ ಯುವರಾಜನ ಮೋಸದ ಜಾಲ: ಹೆಚ್ಚಿನ ವಿಚಾರಣೆಗೆ 5 ದಿನಗಳ ಕಾಲ ವಶಕ್ಕೆ ಪಡೆದ ಸಿಸಿಬಿ
ದೆಹಲಿಯಲ್ಲಿ ರೈತರ ಪ್ರತಿಭಟನೆ ವಿಷಯದಲ್ಲಿ ಕೇಂದ್ರ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಕೇಂದ್ರ ಸರ್ಕಾರ ವಿದ್ಯುತ್ ವಿತರಣೆಯನ್ನ ಖಾಸಗಿಯವರಿಗೆ ನೀಡಬಾರದು. ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯಬೇಕು. ಹಾವೇರಿ ಜಿಲ್ಲೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿದರು.
ಸ್ಥಳಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ರೈತರ ಬೇಡಿಕೆಗಳನ್ನು ಆಲಿಸಿ ಸಕಾರಾತ್ಮಕ ಭರವಸೆ ನೀಡಿದ ನಂತರ, ರೈತರು ಪ್ರತಿಭಟನೆ ವಾಪಸ್ ಪಡೆದರು.