ಹಾವೇರಿ: ಜಿಲ್ಲೆಯಲ್ಲಿ ಇಂದು ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.

ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ ಒಂದೇ ಕುಟುಂಬದ ನಾಲ್ಕು ಸದಸ್ಯರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ನಾಲ್ವರು ಸದಸ್ಯರಿರುವ ಈ ಕುಟುಂಬದಲ್ಲಿ ಎರಡು ವರ್ಷದ ಮಗುವಿದ್ದು, ಮಗುವಿಗೂ ಸಹ ಸೋಂಕು ತಗುಲಿದೆ. ಮುಂಬೈಯಿಂದ ಆಗಮಿಸಿದ್ದ ಈ ನಾಲ್ವರು ಮೇ 17 ರಿಂದ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದರು ಎಂದು ತಿಳಿದುಬಂದಿದೆ.
ಇದೀಗ ಸೋಂಕಿತರನ್ನ ಕೋವಿಡ್ 19 ಆಸ್ಪತ್ರೆಗೆ ಕರೆತರಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಈವರೆಗೆ 10 ಪಾಸಿಟಿವ್ ಪ್ರಕರಣಗಳು ಕಾಣಿಸಿಕೊಂಡಂತಾಗಿದೆ. ಇದರಲ್ಲಿ ಮೂವರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇದೀಗ ಸಕ್ರಿಯ ಸೋಂಕಿತರ ಸಂಖ್ಯೆ 7 ಕ್ಕೇರಿದೆ.
ಇಷ್ಟು ದಿನ ಜಿಲ್ಲೆಯ ಸವಣೂರು ಶಿಗ್ಗಾವಿ ತಾಲೂಕುಗಳಲ್ಲಿ ಕಾಣಿಸಿಕೊಂಡಿದ್ದ ಕೊರೊನಾ ಇದೀಗ ರಾಣೆಬೆನ್ನೂರು ತಾಲೂಕಿಗೂ ಕಾಲಿಟ್ಟಂತಾಗಿದೆ.