ಹಾವೇರಿ: ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಯ ಗಡಿಕ್ಯಾತೆ ಖಂಡಿಸಿ ಹಾವೇರಿಯಲ್ಲಿ ಕರವೇ ಪ್ರತಿಭಟನೆ ನಡೆಸಿತು.
ನಗರದ ಕಾಗಿನೆಲೆ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಎಂಇಎಸ್(ಮಹಾರಾಷ್ಟ್ರ ಏಕೀಕರಣ ಸಮಿತಿ) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕರವೇ ಪ್ರವೀಣಶೆಟ್ಟಿ ಬಣದ ಕಾರ್ಯಕರ್ತರು ಪದೇಪದೆ ಗಡಿಕ್ಯಾತೆ ತೆಗೆಯುವ ಎಂಇಎಸ್ ವಿರುದ್ಧ ಕಿಡಿಕಾರಿದರು. ಕನ್ನಡಿಗರಿಗೆ, ಕನ್ನಡಧ್ವಜಕ್ಕೆ ಮತ್ತು ರಾಜ್ಯದ ಮುಖ್ಯಮಂತ್ರಿಗಳಿಗೆ ಅವಮಾನ ಮಾಡಿರುವುದನ್ನು ಕರವೇ ಕಾರ್ಯಕರ್ತರು ಖಂಡಿಸಿದರು.
ಎಂಇಎಸ್‌ನಿಂದ ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ಕೂಡಲೇ ಎಂಇಎಸ್ ತನ್ನ ಧೋರಣೆ ಕೈಬಿಡಬೇಕು. ಇಲ್ಲದಿದ್ರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.