ETV Bharat / state

ಅಖಂಡ ಧಾರವಾಡದಲ್ಲಿ ಕೈ, ಕಮಲ ಅಭ್ಯರ್ಥಿಗಳ ಗೆಲುವಿಗೆ ಹಾವೇರಿ ಮತದಾರರೇ ನಿರ್ಣಾಯಕ - ವಿಧಾನ ಪರಿಷತ್‌ ಚುನಾವಣೆ

ಅಖಂಡ ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ವಿಧಾನ ಪರಿಷತ್‌ ಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ. ಹಾವೇರಿ ಜಿಲ್ಲೆಯ ಮತದಾರರೇ ಇಲ್ಲಿ ನಿರ್ಣಾಯಕವಾಗಿದ್ದು ಎರಡೂ ರಾಷ್ಟ್ರೀಯ ಪಕ್ಷಗಳು ಜಿಲ್ಲೆಗೆ ಹೆಚ್ಚು ಒತ್ತು ನೀಡಿವೆ.

Haveri legislative council Election Update
ಪರಿಷತ್‌ ಚುನಾವಣೆ; ಅಖಂಡ ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಹಾವೇರಿ ಮತದಾರರೇ ನಿರ್ಣಾಯಕ..!
author img

By

Published : Dec 8, 2021, 7:51 AM IST

ಹಾವೇರಿ: ತೀವ್ರ ಕುತೂಹಲ ಮೂಡಿಸಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಅಖಂಡ ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆಗಳ 7,491 ಜನಪ್ರತಿನಿಧಿಗಳು ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ. ಈ ಪೈಕಿ, ಧಾರವಾಡ ಜಿಲ್ಲೆಯಲ್ಲಿ 2,165 ಜನಪ್ರತಿನಿಧಿಗಳಿದ್ದರೆ, ಗದಗ ಜಿಲ್ಲೆಯಲ್ಲಿ 1,967 ಮತದಾರರಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ 3,359 ಮತದಾರರಿದ್ದು, ಪರಿಷತ್ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರವನ್ನು ಹಾವೇರಿ ಜಿಲ್ಲೆಯ ಸ್ಥಳೀಯ ಜನಜನಪ್ರತಿನಿಧಿಗಳು ವಹಿಸುತ್ತಾರೆ. ಈಗಾಗಲೇ ಎರಡೂ ರಾಷ್ಟ್ರೀಯ ಪಕ್ಷಗಳು ಅತಿಹೆಚ್ಚು ಮತದಾರರಿರುವ ಹಾವೇರಿ ಜಿಲ್ಲೆಗೆ ಹೆಚ್ಚು ಮಹತ್ವ ನೀಡಿವೆ. ಬಿಜೆಪಿ ಪ್ರದೀಪ್ ಶೆಟ್ಟರ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದರೆ, ಕಾಂಗ್ರೆಸ್ ಸಲೀಂ ಅಹ್ಮದ್ ಅವರನ್ನು ಸ್ಪರ್ಧೆಗಿಳಿಸಿದೆ.

ಕ್ಷೇತ್ರದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ತಲಾ ಒಂದೊಂದು ಅಭ್ಯರ್ಥಿಯನ್ನು ಆಯ್ಕೆ ಮಾಡಿರುವುದು ಇಬ್ಬರು ಅಭ್ಯರ್ಥಿಗಳ ಆಯ್ಕೆ ಸುಗಮವಾಗಿಸಿದೆ. ಆದರೂ ಸಹ ಎರಡೂ ಪಕ್ಷಗಳು ಹಾವೇರಿ ಜಿಲ್ಲೆಯ ಮತದಾರರ ಮನವೊಲಿಸುವ ಪ್ರಯತ್ನದಲ್ಲಿವೆ. ಹಾವೇರಿ ಜಿಲ್ಲೆಯತ್ತ ತಮ್ಮ ಚಿತ್ತ ಹರಿಸಿರುವ ಎರಡೂ ಪಕ್ಷಗಳು ಜಿಲ್ಲೆಯಲ್ಲಿ ತಾಲೂಕುವಾರು ಸಭೆಗಳನ್ನು ನಡೆಸಿವೆ. ಪುರಸಭೆ, ನಗರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್‌ಗಳ ಸದಸ್ಯರ ಮತ ಪಡೆಯಲು ತಂತ್ರ ರೂಪಿಸಿವೆ.

ಇದೇ 10 ರಂದು ಪರಿಷತ್‌ ಚುನಾವಣೆಗೆ ಮತದಾನ ನಡೆಯಲಿದೆ. 14ಕ್ಕೆ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಪರಿಷತ್ ಚುನಾವಣೆ ಕಣಕ್ಕಿಳಿಯದ ಕಾಂಗ್ರೆಸ್​​ ಹಾಲಿ ಸದಸ್ಯರ ಮುಂದಿನ ಭವಿಷ್ಯವೇನು?!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.