ETV Bharat / state

ಗರಿಗೆದರಿದೆ ಸ್ಥಳೀಯ ಸಂಸ್ಥೆಗಳ ಚುನಾವಣೆ; ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಮೀಸಲು ಪ್ರಕಟ

author img

By

Published : Oct 10, 2020, 9:13 PM IST

ಹಾವೇರಿಯ ಎರಡು ನಗರಸಭೆ ನಾಲ್ಕು ಪುರಸಭೆ ಮತ್ತು ಎರಡು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ಪ್ರಕಟವಾಗಿದೆ.

Haveri Local body election

ಹಾವೇರಿ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಮೀಸಲಾತಿ ಪ್ರಕಟವಾಗಿದೆ. ಜಿಲ್ಲೆಯ ಎರಡು ನಗರಸಭೆ ನಾಲ್ಕು ಪುರಸಭೆ ಮತ್ತು ಎರಡು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ಪ್ರಕಟವಾಗಿದೆ.

ಹಾವೇರಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ

ಹಾವೇರಿ ನಗರಸಭೆಯ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ಎ ಮಹಿಳೆಗೆ ಮೀಸಲಾಗಿದೆ. ರಾಣೆಬೆನ್ನೂರು ನಗರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಾಗಿದೆ. ಬ್ಯಾಡಗಿ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ಎ ಮಹಿಳೆಗೆ ಮೀಸಲಾಗಿದೆ.

ಹಾನಗಲ್ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ಎ ವರ್ಗಕ್ಕೆ ಮೀಸಲಾಗಿದೆ. ಸವಣೂರ ಪುರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ಬಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಶಿಗ್ಗಾಂವ್ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ವರ್ಗಕ್ಕೆ ಮೀಸಲಾಗಿದೆ.

ಹಿರೇಕೆರೂರ ಪಟ್ಟಣ ಪಂಚಾತಿಯ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಗುತ್ತಲ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿರಿಸಿ ಅಧಿಸೂಚನೆ ಪ್ರಕಟಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.