ಹಾವೇರಿ: ಕೊರೊನಾ ಶಂಕಿತ ಮಹಿಳೆ ಅಂತ್ಯಸಂಸ್ಕಾರಕ್ಕೆ ಜಿಲ್ಲೆಯ ರಾಣೆಬೆನ್ನೂರು ನಗರದ ಕೂನಬೇವು ಪ್ಲಾಟ್ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ 48 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಇಂದು ಮಹಿಳೆಯ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಕೂನಬೇವು ಪ್ಲಾಟ್ ಬಳಿ ಇರುವ ಸ್ಮಶಾನದ ಸಮೀಪದಲ್ಲೇ ಮನೆಗಳು ಇರೋದ್ರಿಂದ ಅಂತ್ಯಕ್ರಿಯೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.
ಬಳಿಕ ಪೊಲೀಸರು ಮತ್ತು ತಹಶೀಲ್ದಾರ್ ಸ್ಥಳೀಯರ ಮನವೊಲಿಸಿ ಕೋವಿಡ್-19 ನಿಯಮಾವಳಿ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಜುಲೈ 7, 2020ರಂದು ಕೊರೊನಾ ಸೋಂಕಿನಿಂದ ಈಕೆಯ ಪತಿ ಮೃತಪಟ್ಟಿದ್ದ. ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾಳೆ.