ಹಾವೇರಿ: ಪರೀಕ್ಷೆಗೆ ಕಳಿಸಲಾಗಿದ್ದ ಹಾವೇರಿಯ ಇಬ್ಬರು ಕೊರೊನಾ ಶಂಕಿತರ ವರದಿ ನೆಗೆಟಿವ್ ಬಂದಿದೆ. ವಿದೇಶ ಪ್ರವಾಸ ಮುಗಿಸಿಕೊಂಡು ಭಾನುವಾರ ಹಾವೇರಿಗೆ ಬಂದಿದ್ದ ಇಬ್ಬರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು.
ಕೊರೊನಾ ಲಕ್ಷಣಗಳು ಅವರಲ್ಲಿ ಕಾಣಿಸಿಕೊಂಡಿದ್ದರಿಂದ ಅವರನ್ನ ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಲಾಗಿತ್ತು. ಅಲ್ಲದೆ ಅವರಿಬ್ಬರ ರಕ್ತ ಮತ್ತು ಗಂಟಲಿನ ದ್ರವವನ್ನ ಶಿವಮೊಗ್ಗಕ್ಕೆ ಪರೀಕ್ಷೆಗೆ ಕಳಿಸಲಾಗಿತ್ತು.
ಈ ಪರೀಕ್ಷೆಯ ವರದಿ ಸೋಮವಾರ ಬಂದಿದ್ದು, ಇಬ್ಬರಲ್ಲಿಯೂ ನೆಗೆಟಿವ್ ಫಲಿತಾಂಶ ಬಂದಿದೆ. ಕೊರೊನಾ ಶಂಕೆ ಮೇಲೆ 60 ವರ್ಷ ವೃದ್ಧ, ಮೂರು ವರ್ಷದ ಮೊಮ್ಮಗನ ರಕ್ತ ಮತ್ತು ಗಂಟಲಿನ ದ್ರವವನ್ನ ಶಿವಮೊಗ್ಗಕ್ಕೆ ಕಳಿಸಲಾಗಿತ್ತು. ಇದೀಗ ಇಬ್ಬರ ವರದಿ ನೆಗಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಂದ್ರ ದೊಡ್ಡಮನಿ ತಿಳಿಸಿದ್ದಾರೆ.