ETV Bharat / state

ಹಾವೇರಿ: ಗೋಡೆ ಕುಸಿದು ಗಂಭೀರವಾಗಿ ಗಾಯಗೊಂಡ ಮಗು ಸಾವು

author img

By

Published : Jul 25, 2023, 11:43 AM IST

ಮಳೆಗೆ ಮನೆ ಗೋಡೆ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ.

ಗೋಡೆ ಕುಸಿದು ಮಗು ಸಾವು
ಗೋಡೆ ಕುಸಿದು ಮಗು ಸಾವು

ಹಾವೇರಿ: ನಿರಂತರ ಮಳೆಯಿಂದ ಮನೆ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ಪುಟ್ಟ ಮಗು ಸಾವನ್ನಪ್ಪಿದೆ. ಈ ಘಟನೆ ಹಾವೇರಿ ತಾಲೂಕು ಮಾಳಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಮೂರು ವರ್ಷದ ಭಾಗ್ಯ ಚಲಮರದ್ ಎಂದು ಗುರುತಿಸಲಾಗಿದೆ.

ಕಳೆದ ಎರಡು ದಿನಗಳ ಹಿಂದೆ ನಿರಂತರ ಮಳೆಗೆ ಮನೆ ಕುಸಿದು ಬಿದ್ದು ಮಗು ಗಾಯಗೊಂಡಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮಗುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಇನ್ನೊಂದು ಮಗು ಚೇತರಿಸಿಕೊಳ್ಳುತ್ತಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಲಬುರಗಿಯಲ್ಲೂ ಇಂತಹದ್ದೇ ಘಟನೆ: ಮನೆ ಛಾವಣಿ ಕುಸಿದು ಮಹಿಳೆ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ತಾಲೂಕಿನ ಬಿರಾಳ ಬಿ ಗ್ರಾಮದಲ್ಲಿ ಸೋಮವಾರ (ನಿನ್ನೆ) ನಡೆದಿದೆ. ಬಸಮ್ಮ ಬಳಗಾರ (35) ಮೃತರು. ಬಸಮ್ಮ ಬಳಗಾರರಿಗೆ ಮೂವರು ಮಕ್ಕಳಿದ್ದು, ಕುಟುಂಬಕ್ಕೆ ಸರ್ಕಾರ ಕೂಡಲೇ 10 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಗ್ರಾಮದ ಮುಖಂಡ ಪರಮೇಶ್ವರ ಬಿರಾಳ ಒತ್ತಾಯಿಸಿದ್ದಾರೆ.

ಗೋಡೆ ಕುಸಿದು ಕುರಿಮರಿಗಳು ಸಾವು: ಕೆಲವು ದಿನಗಳಿಂದ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯಲ್ಲಿ ಸುಮಾರು 30 ಮನೆಗಳು ಭಾಗಶಃ ಹಾನಿಗೊಳಗಾಗಿದ್ದು, 5 ಕುರಿ ಮರಿಗಳ ಜೀವಹಾನಿ ಸಂಭವಿಸಿದೆ ಎಂದು ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಿದೆ. ನಿರಂತರ ಮಳೆಯಿಂದಾಗಿ ಧಾರವಾಡ ತಾಲೂಕಿನಲ್ಲಿ 13 ಮನೆಗಳು, ಹುಬ್ಬಳ್ಳಿ ಗ್ರಾಮೀಣದಲ್ಲಿ 3, ಅಳ್ನಾವರ ತಾಲೂಕಿನ 3, ಹುಬ್ಬಳ್ಳಿ ಶಹರ ತಾಲೂಕಿನಲ್ಲಿ 2, ಕುಂದಗೋಳ ತಾಲೂಕಿನಲ್ಲಿ 2 ಮತ್ತು ಕಲಘಟಗಿ ತಾಲೂಕಿನಲ್ಲಿ 7 ಮನೆಗಳಿಗೆ ಹಾನಿಯಾಗಿರುವುದು ವರದಿಯಾಗಿದೆ.

ಮನೆ ಕುಸಿದು ಒಂದೇ ಕುಟುಂಬದ 13 ಮಂದಿಗೆ ಗಾಯ: ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಗೆ ಮನೆಯೊಂದು ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ 13 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದಿತ್ತು. ಘಟನೆಯಲ್ಲಿ ವೃದ್ಧೆ ಈರಮ್ಮ ಪತ್ರೆಪ್ಪನವರ (95), ಸಂಬಂಧಿ ಬಸವಣ್ಣೆಪ್ಪ ತಡಕೋಡ (55), ಸುಮಂತ ಪತ್ರೆಪ್ಪನವರ (8), ವಿನಾಯಕ ಪತ್ರೆಪ್ಪನವರ (15), ಶಂಕರೆಪ್ಪ ಪತ್ರೆಪ್ಪನವರ (50), ಪಾರವ್ವ ಪತ್ರೆಪ್ಪನವರ (55) ಅವಶೇಷಗಳಡಿ ಸಿಲುಕಿದ್ದರು. ಮನೆ ಬಿದ್ದ ಸದ್ದು ಕೇಳಿ ಸ್ಥಳಕ್ಕೆ ದೌಡಾಯಿಸಿದ ನೆರೆಯ ಜನ ಅವಶೇಷಗಳಡಿ ಸಿಲುಕಿದ್ದವರನ್ನು ರಕ್ಷಣೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗೋಡೆ ಕುಸಿದು ಕುರಿಮರಿಗಳು ಸಾವು: ಧಾರವಾಡದಲ್ಲೂ ನಿರಂತರ ಮಳೆಯಾಗುತ್ತಿದ್ದು, ಹುಬ್ಬಳ್ಳಿ ತಾಲೂಕಿನ ಕಟ್ನೂರು ಗ್ರಾಮದ ಶಿವನಗೌಡ ಹೊಳೆಪ್ಪಗೌಡ ಪಾಟೀಲ ಅವರ ಮನೆ ಗೋಡೆ ಕುಸಿದು 5 ಕುರಿಮರಿಗಳ ಸಾವನ್ನಪ್ಪಿರುವ ಘಟನೆ ಕಳೆದ ಎರಡು ದಿನಗಳ ಹಿಂದೆ ನಡೆದಿತ್ತು.

ಇದನ್ನೂ ಓದಿ: Karnataka Rains: ಕೊಡಗಿನಲ್ಲಿ 24 ಗಂಟೆಯಲ್ಲಿ 114 ಮಿಮೀ ಮಳೆ; ಶಾಲಾ-ಕಾಲೇಜುಗಳಿಗೆ ರಜೆ, ಉಕ್ಕಿದ ನದಿಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.