ಹಾವೇರಿ: ನಗರದ ರೈಲ್ವೆ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಮಹದೇವಪ್ಪ ಮೈಲಾರ ಹೆಸರು ನಾಮಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಹಾವೇರಿ ರೈಲ್ವೆ ನಿಲ್ದಾಣ ಇನ್ನು ಮುಂದೆ ಮಹದೇವಪ್ಪ ಮೈಲಾರ ನಿಲ್ದಾಣವಾಗಲಿದ್ದು, ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಿಂದ ಆದೇಶ ಹೊರಡಿಸಲಾಗಿದೆ. ರೈಲ್ವೆ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರನ ಹೆಸರು ನಾಮಕರಣ ಮಾಡಿದ್ದಕ್ಕೆ ಜಿಲ್ಲೆಯ ಜನರಲ್ಲಿ ಸಂತಸ ತಂದಿದೆ.
ಈ ಆದೇಶ ಮಹದೇವಪ್ಪ ಮೈಲಾರ ಅವರ ಅಭಿಮಾನಿಗಳಲ್ಲಿ ಹರ್ಷ ಮೂಡಿಸಿದ್ದು, ಸರ್ಕಾರದ ಆದೇಶಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ದಂಡಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಏಕೈಕ ಕನ್ನಡಿಗ, ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣ ತ್ಯಾಗ ಮಾಡಿದ ವೀರನಿಗೆ ಈ ರೀತಿ ಗೌರವ ಸಂದಿರುವುದು ಸ್ವಾತಂತ್ರ್ಯ ಹೋರಾಟಗಾರರಿಗೆ ಸಂತಸ ತರಿಸಿದೆ.