ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿಯಾಗಿ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಘಟನೆ ಹಾವೇರಿ ಸಮೀಪದ ಕರ್ಜಗಿಯಲ್ಲಿ ನಡೆದಿದೆ.

ನೀಲವ್ವ ನಡುವಿನಮನಿ (45) ಮೃತ ಮಹಿಳೆ. ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದು, ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಿಮ್ಮಾಪುರದಿಂದ ಬ್ಯಾಡಗಿಗೆ ಕೂಲಿ ಕೆಲಸಕ್ಕೆ ಜನರನ್ನ ಕರೆದುಕೊಂಡು ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ.
ಮೃತ ನೀಲವ್ವ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹಿರೇಮುಗದೂರು ಗ್ರಾಮದವಳು ಎನ್ನಲಾಗಿದೆ. ಈ ಕುರಿತಂತೆ ಹಾವೇರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.