ETV Bharat / state

ಕೊರೊನಾ ಬಗ್ಗೆ ಜಾಗೃತಿ ಮೂಡಿಸುವತ್ತ ಚಿತ್ತ ಹರಿಸದ ಹಾವೇರಿ ಜಿಲ್ಲಾಡಳಿತ

author img

By

Published : Mar 5, 2020, 4:50 PM IST

ಕೊರೊನಾ ವೈರಸ್​​ ಭಾರತಕ್ಕೆ ಕಾಲಿಟ್ಟಿರುವ ಬಗ್ಗೆ ಎಲ್ಲರೂ ಭಯಭೀತರಾಗಿದ್ದು, ಸರ್ಕಾರದ ವತಿಯಿಂದ ಎಲ್ಲೆಡೆ ಜಾಗೃತಿ ಮೂಡಿಸಲಾಗುತ್ತಿದೆ. ಆದರೆ ಹಾವೇರಿ ಜಿಲ್ಲಾಡಳಿತ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ.

Haveri ZP is not creating the Awareness
ಕೊರೊನಾ ಬಗ್ಗೆ ಜಾಗೃತಿ ಮೂಡಿಸದ ಹಾವೇರಿ ಜಿಲ್ಲಾಡಳಿತ

ಹಾವೇರಿ: ಚೀನಾದಲ್ಲಿ ಉಂಟಾದ ಕೊರೊನಾ ವೈರಸ್​​ ಇದೀಗ ಭಾರತಕ್ಕೂ ಹಬ್ಬಿದ್ದು, ರಾಜ್ಯದೆಲ್ಲೆಡೆ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಆದರೆ ಹಾವೇರಿ ಜಿಲ್ಲಾಡಳಿತ ಮಾತ್ರ ಈ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.

ಕೊರೊನಾ ವೈರಸ್​​ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಜಿಲ್ಲಾಸ್ಪತ್ರೆಯಲ್ಲಿ ಒಂದು ವಾರ್ಡ್​ ತೆರೆದಿದ್ದು ಬಿಟ್ಟರೆ, ಸಾರ್ವಜನಿಕ ಸ್ಥಳಗಳಾದ ಬಸ್​ ನಿಲ್ದಾಣ ಅಥವಾ ರೈಲು ನಿಲ್ದಾಣಗಳಲ್ಲಿ ಈ ಬಗ್ಗೆ ಯಾವುದೇ ಭಿತ್ತಿ ಪತ್ರಗಳು ಸಹ ಗೋಚರಿಸುತ್ತಿಲ್ಲ.

ಈ ಬಗ್ಗೆ ಸಾರ್ವಜನಿಕರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪರ ಊರಿನಿಂದ ಹಾವೇರಿ ಜಿಲ್ಲಾ ಕೇಂದ್ರಕ್ಕೆ ಬರುವ ಹಳ್ಳಿಗರಿಗೆ ಕೊರೊನಾ ವೈರಸ್​ ಬಗ್ಗೆ ತಿಳಿದಿರುವುದಿಲ್ಲ, ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವತ್ತ ಜಿಲ್ಲಾಡಳಿತ ಹೆಜ್ಜೆ ಹಾಕಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.