ಹಾವೇರಿ: ಜಿಲ್ಲೆಯಲ್ಲಿ ಮೊದಲ ಕೊರೊನಾ ಸೋಂಕಿತ ವ್ಯಕ್ತಿ ರೋಗಿ ಸಂಖ್ಯೆ 639 ಗುಣಮುಖನಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾನೆ.
ಆಸ್ಪತ್ರೆಯಿಂದ ಬಿಡುಗಡೆಯಾದ ವ್ಯಕ್ತಿಗೆ ಆರೋಗ್ಯ ಸಿಬ್ಬಂದಿ ಚಪ್ಪಾಳೆ ತಟ್ಟಿ ಹೂ ನೀಡುವ ಮೂಲಕ ಶುಭ ಹಾರೈಸಿದರು. ಅಲ್ಲದೆ ಮುಂದಿನ 14 ದಿನ ಮನೆಯಲ್ಲೇ ಇರುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮುಖ್ಯ ಶಸ್ತ್ರ ಚಿಕಿತ್ಸಕ ಪಿ.ಆರ್.ಹಾವನೂರು, ಡಾ. ಸಾಲಿಮಠ ಸೇರಿದಂತೆ ಇತರ ವೈದ್ಯರು ಉಪಸ್ಥಿತರಿದ್ದರು. ಈತನ ಬಿಡುಗಡೆಯಿಂದಾಗಿ ಜಿಲ್ಲೆಯಲ್ಲಿ ಇದೀಗ ಕೊರೊನಾ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಇಳಿದಿದೆ.