ಹಾವೇರಿ: ಪ್ರಧಾನಿ ನರೇಂದ್ರ ಮೋದಿಯವರ ಜೊತೆಗಿನ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಯ್ಕೆ ಆಗಿದ್ದಾರೆ.
ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಆಯ್ಕೆಯಾದ ವೇದಾ ಹನುಮನಹಳ್ಳಿಮಠ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡ್ತಿದ್ದಾರೆ. ಪ್ರಧಾನಿ ಜೊತೆಗಿನ ಕಾರ್ಯಕ್ರಮಕ್ಕೆ ಆಯ್ಕೆಯಾದ ಹಿನ್ನೆಲೆ ಕಾಲೇಜಿನ ಸಿಬ್ಬಂದಿ ಹಾಗೂ ಕುಟುಂಬದವರು ಸಂತಸ ವ್ಯಕ್ತಪಡಿಸಿದ್ದಾರೆ.