ಹಾವೇರಿ: ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ನದಿಗಳು ಮೈದುಂಬಿ ಹರಿಯುತ್ತಿವೆ. ಜೊತೆಗೆ ಮಳೆ ಅವಾಂತರದಿಂದಾಗಿ ಹಲವೆಡೆ ಬೆಳೆಗಳು ಧರಾಶಾಹಿಯಾಗಿವೆ.
ಜಿಲ್ಲೆಯ ಹಿರೇಕೆರೂರು ತಾಲೂಕಿನ ನಿಡನೇಗಿಲು ಗ್ರಾಮದಲ್ಲಿ ಅಶೋಕ ಬಿಲ್ಲಳ್ಳಿ ಎಂಬ ರೈತ ಬೆಳೆದಿದ್ದ ಮೂರು ಎಕರೆ ಬಾಳೆ ನೆಲಕಚ್ಚಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಬಾಳೆ ಇದೀಗ ಮಣ್ಣು ಪಾಲಾಗಿದೆ. ಸಂಕಷ್ಟಕ್ಕೀಡಾಗಿರುವ ರೈತ ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.