ಹಾವೇರಿ: ಸಿಡಿಲು ಬಡಿದು 15 ವರ್ಷದ ಬಾಲಕ ಸಾವಿಗೀಡಾಗಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ನೀರಲಕಟ್ಟಿ ಗ್ರಾಮದ ಬಳಿ ನಡೆದಿದೆ. ಮೃತ ಬಾಲಕನನ್ನು ಮಹಾಂತೇಶ ಜಟ್ಟೆಪ್ಪನವರ್ ಎಂದು ಗುರುತಿಸಲಾಗಿದೆ. ಶಿಗ್ಗಾವಿ ತಾಲೂಕಿನ ಚಂದಾಪುರ ಗ್ರಾಮದ ನಿವಾಸಿಯಾಗಿದ್ದು ಜಮೀನಿಗೆ ತೆರಳುತ್ತಿದ್ದಾಗ ಸಿಡಿಲು ಬಡಿದಿದೆ.
ಇದನ್ನೂ ಓದಿ: ನಕಲಿ ಅಂಕಪಟ್ಟಿ ಬಳಸಿ ವಕೀಲ ಜಗದೀಶ್ ಕಾನೂನು ಪದವಿ ಪಡೆದಿರುವ ಆರೋಪ: ಪ್ರಕರಣ ದಾಖಲು
ಸವಣೂರು ತಾಲೂಕಿನ ಮಂತ್ರೋಡಿ ಗ್ರಾಮದಲ್ಲಿ ಗಾಳಿಗೆ 50ಕ್ಕೂ ಅಧಿಕ ಮನೆಗಳ ಮೇಲ್ಛಾವಣಿಗಳು ಹಾರಿಹೋಗಿವೆ. ಈ ಸಂದರ್ಭದಲ್ಲಿ ಜನರು ಮನೆಗಳಿಂದ ಹೊರಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಕೆಲವು ವಿದ್ಯುತ್ ಕಂಬಗಳು ಸಹ ಧರೆಗುರುಳಿದ್ದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ.