ಹಾವೇರಿ: ಇಬ್ಬರು ಕೊರೊನಾ ಸೋಂಕಿತರು ಪತ್ತೆ ಆಗಿದ್ದರಿಂದ ಸೋಂಕಿತರು ವಾಸವಾಗಿದ್ದ ಸವಣೂರು ಪಟ್ಟಣದ ಎಸ್.ಎಂ.ಕೃಷ್ಣ ನಗರವನ್ನು ಸೀಲ್ ಡೌನ್ ಮಾಡಲಾಗಿದೆ. ಸೀಲ್ ಡೌನ್ ಮಾಡಿರೋ ಪ್ರದೇಶಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಕೈಗೊಂಡ ಕ್ರಮಗಳ ಕುರಿತು ಪರಿಶೀಲನೆ ನಡೆಸಿದ್ದಾರೆ.
ಸೀಲ್ ಡೌನ್ ಪ್ರದೇಶದಲ್ಲಿ ವಾಸವಾಗಿರೋ ಜನರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ಓಡಾಡಬೇಡಿ. ನಿಮಗೆ ಬೇಕಾದ ದಿನಸಿ ವಸ್ತುಗಳು, ತರಕಾರಿ ಮತ್ತು ಹಾಲು ಸೇರಿದಂತೆ ಎಲ್ಲ ವಸ್ತುಗಳನ್ನು ವಿತರಣೆ ಮಾಡುತ್ತೇವೆ. ಈಗಾಗಲೇ ಕೆಲವು ಕಿಟ್ಗಳನ್ನು ವಿತರಣೆ ಮಾಡಿದ್ದು, ನಿರ್ಬಂಧಿತ ಪ್ರದೇಶದ ಜನರಿಗೆ ಬೇಕಾದ ಇನ್ನಷ್ಟು ಸಾಮಗ್ರಿಗಳನ್ನು ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವರು ತಿಳಿಸಿದರು.
ಪಟ್ಟಣದಲ್ಲಿ ಬಫರ್ ಝೋನ್ ರೀತಿಯಲ್ಲಿ ಬಂದೋಬಸ್ತ್ ಕೈಗೊಂಡು ಕೊರೊನಾ ಸೋಂಕು ಹರಡದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಎಸ್ಪಿ ಕೆ.ಜಿ.ದೇವರಾಜ, ಎಸಿ ಅನ್ನಪೂರ್ಣ ಮುದಕಮ್ಮನವರ, ಡಿಎಚ್ಓ ಡಾ.ರಾಜೇಂದ್ರ ದೊಡ್ಡಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.