ರಾಣೆಬೆನ್ನೂರು: ತಾಲೂಕಿನಲ್ಲಿ ಕಳೆದ ಒಂದು ವಾರದ ಕೊರೊನಾ ಸಂಖ್ಯೆ ಹಾಗೂ ಸಾವಿನ ಅಂಕಿ-ಅಂಶಗಳನ್ನು ಪರಿಶೀಲಿಸಿದಾಗ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅಧಿಕಾರಿಗಳ ಮೇಲೆ ಗರಂ ಆದ ಘಟನೆ ನಡೆಯಿತು.
ಓದಿ: ವ್ಯಾಕ್ಸಿನ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ, ಲಸಿಕೆಗಾಗಿ ಗುಂಪು ಸೇರಿಕೊಂಡು ನಿಲ್ಲಬೇಡಿ: ಬೊಮ್ಮಾಯಿ
ಇಂದು ರಾಣೆಬೆನ್ನೂರು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಜಿಲ್ಲೆಯ ಹಿರಿಯ ಅಧಿಕಾರಿಗಳು ಹಾಗೂ ವೈದ್ಯರಿಂದ ತಾಲೂಕಿನ ಕೊರೊನಾ ಬಗ್ಗೆ ಮಾಹಿತಿ ತೆಗೆದುಕೊಂಡರು. ಈ ಸಮಯದಲ್ಲಿ ಕಳೆದ ಒಂದು ವಾರದಿಂದ ತಾಲೂಕಿನಲ್ಲಿ ಕೊರೊನಾ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಜತೆಗೆ ಸಾವಿನ ಸಂಖ್ಯೆ ಕೂಡ ಹೆಚ್ಚಾಗಿರುವುದಕ್ಕೆ ಕಾರಣವೇನು ಎಂದು ಜಿಪಂ ಸಿಇಒ ಹಾಗೂ ಜಿಲ್ಲಾಧಿಕಾರಿಗೆ ಪ್ರಶ್ನಿಸಿ ಗರಂ ಆದರು.
ರಾಣೆಬೆನ್ನೂರು ತಾಲೂಕಿನಲ್ಲಿ ಇಂತಹ ಪರಿಸ್ಥಿತಿ ಬರಲು ಕಾರಣವೇನು ಎಂಬುದನ್ನು ಅಧಿಕಾರಿಗಳು ಅವಲೋಕನ ಮಾಡಿಕೊಳ್ಳಬೇಕು. ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಿದರು ಈ ಪರಿಸ್ಥಿತಿಗೆ ಅಧಿಕಾರಿಗಳೇ ನೇರ ಹೊಣೆ ಎಂದು ತರಾಟೆಗೆ ತೆಗೆದುಕೊಂಡರು.
ತಾಲೂಕಿನಲ್ಲಿ ಪಾಸಿಟಿವ್ ಪ್ರಕರಣ ಇರುವ ಕುಟುಂಬಗಳಿಗೆ ಭೇಟಿ ನೀಡಿ ಅವರೊಂದಿಗೆ ಮಾತನಾಡಿದರು. ಸೂಕ್ತ ಚಿಕಿತ್ಸೆ ಹಾಗೂ ಯಾವ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂಬುದನ್ನು ನೋಡಿದರು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಬೇಕು. ಬೆಡ್, ಬ್ಲಾಂಕೆಟ್ ಜತೆಗೆ ರೋಗನಿರೋಧಕ ಶಕ್ತಿಯ ಮಾತ್ರೆಗಳನ್ನು ನೀಡಬೇಕು ಎಂದು ವೈದ್ಯರಿಗೆ ಸೂಚಿಸಿದರು.