ಹಾನಗಲ್: ತಾಲೂಕಿನ ಎಪಿಎಂಸಿಯ ಅಧ್ಯಕ್ಷ ಸ್ಥಾನಕ್ಕೆ ಸಿದ್ದಪ್ಪ ಬಂಗಾರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗೀತಾ ಕೋರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಾನಗಲ್ ಶಾಸಕ ಸಿ.ಎಂ.ಉದಾಸಿ ಚುನಾಯಿತರಾದ ಅಭ್ಯರ್ಥಿಗಳನ್ನು ಮಾಲಾರ್ಪಣೆ ಮಾಡುವುದರ ಮೂಲಕ ಅಭಿನಂದಿಸಿ, ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಡಳಿತ ತಾಲೂಕಿನ ರೈತರ ಹಿತಾಸಕ್ತಿ ಕಾಪಾಡುವಂತಿರಬೇಕು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿಯ ತಾಲೂಕು ಅಧ್ಯಕ್ಷ, ರಾಜು ಗೌಳಿ, ಬಿ.ಎಸ್.ಅಕ್ಕಿವಳ್ಳಿ, ಪದ್ಮನಾಭ ಕುಂದಾಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.