ಹಾನಗಲ್: ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ಇಂದು ಮಹಿಳಾ ಸಂಘಟನೆ ಪ್ರತಿಭಟಿಸಿ ಅಬಕಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿತು.
ತಾಲೂಕಿನ ಹೊಂಕಣ, ಶೇಷಗಿರಿ, ಕಂಚಿನೆಗಳೂರು ಮುಂತಾದ ಗ್ರಾಮಗಳಲ್ಲಿ ಗೂಡಂಗಡಿಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಹಳ್ಳಿಗಳಲ್ಲಿ ಯುವ ವಯಸ್ಕ ಮಕ್ಕಳು ಮದ್ಯಪಾನ ವ್ಯಸನಿಗಳಾಗುತ್ತಿದ್ದಾರೆ. ಆದ್ದರಿಂದ ದಯವಿಟ್ಟು ಅಧಿಕಾರಿಗಳು ಅಕ್ರಮ ಮದ್ಯಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ಹಲವು ಬಾರಿ ನಾವು ಸಂಬಂಧ ಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಕ್ರಮ ತೆಗೆದುಕೊಂಡಿಲ್ಲ. ಇದು ಅಧಿಕಾರಿಗಳ ಜಾಣ್ಮೆಯ ಕುರುಡುತನ ತೋರಿಸುತ್ತಿದೆ ಎಂದು ಮಹಿಳಾ ಸಂಘಟನೆಯ ಸದಸ್ಯ ಮಂಜುಳಾ ತಿಳಿಸಿದರು. ಈ ಕೂಡಲೇ ಕ್ರಮ ತೆಗೆದುಕೊಳ್ಳದಿದ್ದರೆ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಮಹಿಳೆಯರು ಎಚ್ಚರಿಸಿದರು.