ಹಾವೇರಿ: ಕಾರಣಾಂತರಗಳಿಂದ ಉದ್ಘಾಟಿಸದೆ ಮುಂದೂಡಲಾಗಿದ್ದ ಹಾವೇರಿ ನಗರಸಭೆ ನೂತನ ಕಟ್ಟಡದ ಉದ್ಘಾಟನೆ ಇಂದು ಜರುಗಿತು. ಹಾವೇರಿ ಶಾಸಕ ನೆಹರೂ ಓಲೇಕಾರ್ ಅವರು ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿದರು.
ಬಳಿಕ ನೆಅವರು ನೂತನ ಕಟ್ಟಡದ ಒಳಾಂಗಣವನ್ನ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ವಾಜಪೇಯಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು. ನಗರಸಭೆ ಮಾಜಿ, ಹಾಲಿ ಸದಸ್ಯರು ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.