ಹಾವೇರಿ: ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಇಂದು ಹಾವೇರಿ ಜಿಲ್ಲೆಗೆ ಆಗಮಿಸಿದ್ದರು.
ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ನಡೆದ 5555 ಸ್ವಸಹಾಯ ಸಂಘಗಳ ಉದ್ಘಾಟಿಸಿ ಮಾತನಾಡಿದ ಅವರು, ಸ್ವಸಹಾಯ ಸಂಘ ಸ್ಥಾಪನೆ ಮಾಡಿರುವುದು ನಮಗೆ ನಾವೇ ಸಹಾಯ ಮಾಡಿಕೊಳ್ಳಲು ಎಂದರು.
ಕೇಂದ್ರ ಸರ್ಕಾರದಿಂದ ಹಿಡಿದು ಗ್ರಾಮ ಪಂಚಾಯತಿಯವರೆಗೆ ಹಲವು ಯೋಜನೆಗಳಿವೆ. ಜನರು ಅದರ ಸದ್ಬಳಕೆ ಮಾಡಿಕೊಳ್ಳಬೇಕು. ಹಲವು ಯೋಜನೆಗಳ ಸದ್ಬಳಕೆಯಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ ಎಂದರು. ಇದೇ ವೇಳೆ ಪೌರಕಾರ್ಮಿಕರಿಗೆ ಸನ್ಮಾನ ಮಾಡಲಾಯಿತು. ವಿಕಲಚೇತನರಿಗೆ ವಿವಿಧ ಉಪಕರಣಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಸೇರಿದಂತೆ ಹಲವು ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.